ADVERTISEMENT

ಮಾಜಿ ದೇವದಾಸಿಯರ ಕುಟುಂಬಕ್ಕೆ ₹70 ಲಕ್ಷ ನೆರವು

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 16:26 IST
Last Updated 9 ಜುಲೈ 2025, 16:26 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು: ಮಾಜಿ ದೇವದಾಸಿಯರ ಕುಟುಂಬದ ಸದಸ್ಯರಿಗೆ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ಅವಕಾಶ ಒದಗಿಸಲು ₹70 ಲಕ್ಷ ನೆರವು ನೀಡುವಂತೆ ಸಮಾಜಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಸೂಚಿಸಿದರು.

ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್‌ಪಿ) 2025-26ನೇ ಸಾಲಿನ ಕ್ರಿಯಾ ಯೋಜನೆಯ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ದೇವದಾಸಿಯರ ಕುಟುಂಬದ ಮಕ್ಕಳಿಗೆ ಉಚಿತ ಶಿಕ್ಷಣದ ಜತೆಗೆ, ಉದ್ಯೋಗಕ್ಕೆ ಅಗತ್ಯವಾದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರು.

ADVERTISEMENT

ಪರಿಶಿಷ್ಟ ಸಮುದಾಯದ ಮಕ್ಕಳು ಓದುತ್ತಿರುವ ವಸತಿ ಶಾಲೆಗಳಿಗೆ ಉಚಿತ ವಿದ್ಯುತ್‌ ಪೂರೈಸುವ ಕುರಿತು ಇಂಧನ ಇಲಾಖೆ ಜತೆ ಚರ್ಚೆ ನಡೆಸಲಾಗುವುದು. ಪರಿಶಿಷ್ಟ ಸಮುದಾಯದ ರೋಗಿಗಳಿಗೆ ವೈದ್ಯರ ಪತ್ರವನ್ನು ಆಧರಿಸಿ, ಉಚಿತ ಪ್ರಯಾಣಕ್ಕೆ ಸೌಲಭ್ಯ ಕಲ್ಪಿಸಲಾಗುವುದು. ಪರಿಶಿಷ್ಟರಿಗೆ ನೀಡಲಾದ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ವಸತಿ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯ ನೀಡಬೇಕು ಎಂದು ಹೇಳಿದರು.

ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ರೂಪಿಸಲಾದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆ ನಿರೀಕ್ಷೆಯಂತೆ ಅನುಷ್ಠಾನಗೊಳ್ಳುತ್ತಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಹಣ ಖರ್ಚಾಗಿರುವ ಪ್ರಕರಣಗಳು ಕಂಡುಬಂದರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಸಮಾಜ ಕಲ್ಯಾಣ ಇಲಾಖೆ ಸಲಹೆಗಾರ ವೆಂಕಟಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.