ನವದೆಹಲಿ: ಇಸ್ರೊ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿ ರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಕೆ. ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸ್ವರ್ಗಸ್ತರಾದರು. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ರಾಜ್ಯಸಭೆಯ ಸದಸ್ಯರಾಗಿ(2003–09), ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದರು.
2004ರ ಏಪ್ರಿಲ್‌ನಿಂದ 2009ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ ಸಂಸ್ಥೆಯ ನಿರ್ದೇಶಕರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.