ADVERTISEMENT

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 5:14 IST
Last Updated 25 ಸೆಪ್ಟೆಂಬರ್ 2022, 5:14 IST
ಎಸ್.ಎಂ. ಕೃಷ್ಣ
ಎಸ್.ಎಂ. ಕೃಷ್ಣ    

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರು ಜ್ವರ ಹಾಗೂ ತೀವ್ರ ಉಸಿರಾಟದ ಸಮಸ್ಯೆಯ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರು ಶನಿವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶ ತಜ್ಞರಾದ ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.