ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮುತ್ಸದ್ದಿ ರಾಜಕಾರಣಿ ಎಸ್.ಎಂ. ಕೃಷ್ಣ ಬುಧವಾರ ಪಂಚಭೂತಗಳಲ್ಲಿ ಲೀನವಾದರು. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಎಸ್.ಎಂ. ಕೃಷ್ಣ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ ಹೇಳಲಾಯಿತು. ಗಂಧದ ಕಟ್ಟಿಗೆಯ ಚಿತೆಯಲ್ಲಿದ್ದ ಪಾರ್ಥಿವ ಶರೀರಕ್ಕೆ, ಎಸ್.ಎಂ. ಕೃಷ್ಣ ಅವರ ಮೊಮ್ಮಗ ಹಾಗೂ ಡಿ.ಕೆ. ಶಿವಕುಮಾರ್ ಅವರ ಅಳಿಯ ಅಮರ್ತ್ಯ ಹೆಗ್ಡೆ ಅಗ್ನಿ ಸ್ಪರ್ಶ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.