ADVERTISEMENT

ಎಸ್.ಎಂ.ಕೃಷ್ಣ ನಿಧನ: ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಅಂತ್ಯಸಂಸ್ಕಾರ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2024, 2:21 IST
Last Updated 10 ಡಿಸೆಂಬರ್ 2024, 2:21 IST
<div class="paragraphs"><p>ಎಸ್.ಎಂ.ಕೃಷ್ಣ</p></div>

ಎಸ್.ಎಂ.ಕೃಷ್ಣ

   

ಬೆಂಗಳೂರು: ಇಂದು (ಡಿ.10) ನಿಧನರಾದ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರವನ್ನು ಮಂಡ್ಯ ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ನೆರವೇರಿಸಲಾಗುವುದು.

ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಎಸ್.ಎಂ. ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಸೋಮನಹಳ್ಳಿಗೆ ಜಿಲ್ಲಾಧಿಕಾರಿ ಭೇಟಿ:

ಎಸ್‌.ಎಂ. ಕೃಷ್ಣ ಅವರ ಅಂತ್ಯಕ್ರಿಯೆಯ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮದ್ದೂರು ತಾಲ್ಲೂಕು ಸೋಮನಹಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಉಪಸ್ಥಿತರಿದ್ದರು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಬೆಂಗಳೂರಿನ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.