ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಹಂಗಾಮಿ ಸಭಾಪತಿ ಡೇವಿಡ್ ಸಿಮಿಯೋನ್ (75) ಅವರು ನಗರದಲ್ಲಿ ಮಂಗಳವಾರ ನಿಧನರಾದರು.
ಯಾದಗಿರಿ ತಾಲ್ಲೂಕಿನ ಮಲ್ಹಾರ ಗ್ರಾಮದ ಸಿಮಿಯೋನ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.
1996ರಲ್ಲಿ ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡಿದ್ದ ಡೇವಿಡ್ ಸಿಮಿಯೋನ್ ಅವರು, ಉಪ ಸಭಾಪತಿಯಾಗಿದ್ದರು. 2000ದ ಜೂನ್‌ನಿಂದ 2001ರ ಆಗಸ್ಟ್‌ವರೆಗೆ ಹಂಗಾಮಿ ಸಭಾಪತಿಯಾಗಿದ್ದರು.
ಕಲಬುರಗಿಯ ಮೆಥೋಡಿಸ್ಟ್ ಚರ್ಚ್ ಆವರಣದಲ್ಲಿ ಜೂನ್ 12ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ನಂತರ, ಕಲಬುರಗಿಯ ವೆಂಕಟೇಶನಗರ ಕ್ರೈಸ್ತ ಧರ್ಮದ ಸ್ಮಶಾನದಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
‘ಎಲ್ಲಾ ಜನಾಂಗಗಳ ಬಗೆಗೂ ಅತೀವ ಪ್ರೀತಿ, ಕಾಳಜಿ ಹೊಂದಿದ್ದ ಡೇವಿಡ್ ಸಿಮಿಯೋನ್, ಉತ್ತರ ಕರ್ನಾಟಕ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕ ಸೇರಿದಂತೆ ಎಲ್ಲಾ ರಂಗಗಳ ಅಭಿವೃದ್ದಿಗೆ ಅರ್ಹನಿಶಿ ಶ್ರಮಿಸಿದ್ದರು. ತಮ್ಮ ಸರಳ ಹಾಗೂ ಸಜ್ಜನಿಕೆಯಿಂದ ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.