ADVERTISEMENT

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ರಾಜೀನಾಮೆ- ಶೀಘ್ರ ಬಿಜೆಪಿಗೆ

​ಪ್ರಜಾವಾಣಿ ವಾರ್ತೆ
Published 7 ಮೇ 2022, 10:36 IST
Last Updated 7 ಮೇ 2022, 10:36 IST
ಪ್ರಮೋದ್ ಮಧ್ವರಾಜ್
ಪ್ರಮೋದ್ ಮಧ್ವರಾಜ್   

ಉಡುಪಿ: ಮಾಜಿ ಸಚಿವ ಹಾಗೂಕಾಂಗ್ರೆಸ್ ನಾಯಕರಾಗಿದ್ದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಪ್ರಮೋದ್ ಮಧ್ವರಾಜ್,ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.

ಪ್ರಮೋದ್ ಬಿಜೆಪಿ ಸೇರುವುದು ಖಚಿತವಾಗಿದ್ದು, ಶೀಘ್ರ ವರಿಷ್ಠರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.