ADVERTISEMENT

ಸುರಪುರ: ಮಾಜಿ ಸಂಸದ ರಾಜಾ ರಂಗಪ್ಪನಾಯಕ ನಿಧನ

​ಪ್ರಜಾವಾಣಿ ವಾರ್ತೆ
Published 11 ಮೇ 2020, 10:28 IST
Last Updated 11 ಮೇ 2020, 10:28 IST
ರಾಜಾ ರಂಗಪ್ಪನಾಯಕ
ರಾಜಾ ರಂಗಪ್ಪನಾಯಕ   

ಸುರಪುರ: ಮಾಜಿ ಸಂಸದ ರಾಜಾ ರಂಗಪ್ಪನಾಯಕ (61) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. ಮೃತರಿಗೆ ಪುತ್ರ ಕಾಂಗ್ರೆಸ್ ಪಕ್ಷದ ಮುಖಂಡ ರಾಜಾ ರೂಪಕುಮಾರನಾಯಕ ಸೇರಿದಂತೆ, ಇಬ್ಬರು ಪುತ್ರಿಯರು ಇದ್ದಾರೆ.

ರಾಜಕೀಯ ಹಿನ್ನೆಲೆ ಹೊಂದಿದ ಕುಟುಂಬದಿಂದ ಬಂದ ರಾಜಾ ರಂಗಪ್ಪನಾಯಕ 1996ರಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಸಂಸದರಾಗಿ ಆಯ್ಕೆಯಾಗಿದ್ದರು. ತಾಲ್ಲೂಕಿನ ರುಕ್ಮಾಪುರ ಮಂಡಲ ಪ್ರಧಾನರಾಗಿ ರಾಜಕೀಯ ಜೀವನ ಆರಂಭಿಸಿದ ಅವರು 1993ರಲ್ಲಿ ಕಲಬುರ್ಗಿ ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಟ್ವೀಟ್ ಮಾಡಿರಾಜಾ ರಂಗಪ್ಪನಾಯಕ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ADVERTISEMENT

ಮೃತರ ತಂದೆ ದಿವಂಗತ ರಾಜಾ ಕುಮಾರನಾಯಕ ಮೂರು ಬಾರಿ ಸುರಪುರದ ಶಾಸಕರಾಗಿದ್ದರು. ಹಿರಿಯ ಸಹೋದರ ರಾಜಾ ವೆಂಕಟಪ್ಪನಾಯಕ ಅವರೂ ಮೂರು ಬಾರಿ ಶಾಸಕರಾಗಿದ್ದರು. ಕಿರಿಯ ಸಹೋದರ ರಾಜಾ ಮೌನೇಶ್ವರ ನಾಯಕ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿದ್ದರು. ಮೃತರ ಗೌರವಾರ್ಥ ನಗರದ ಅಂಗಡಿ ಮುಂಗಟ್ಟುಗಳು ಬಂದಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.