ADVERTISEMENT

ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ: ಎಚ್‌.ಡಿ ದೇವೇಗೌಡ ಬೇಸರ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 9:45 IST
Last Updated 29 ಅಕ್ಟೋಬರ್ 2021, 9:45 IST
   

ಬೆಂಗಳೂರು: ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್‌.ಡಿ ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರು ನಿಧನರಾದ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಂಬನಿ ಮಿಡಿದಿದ್ದಾರೆ.

ADVERTISEMENT

‘ಕನ್ನಡ ಚಿತ್ರ ರಂಗದ ಖ್ಯಾತ ಚಿತ್ರನಟ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಗಿದೆ. ಅವರ ನಟಿಸಿದ್ದ ‘ಪೃಥ್ವಿ’ ಮತ್ತು ‘ರಾಜಕುಮಾರ’ ಚಿತ್ರವನ್ನು ಅಪ್ಪು ಅವರ ಜೊತೆಯಲ್ಲೇ ನೋಡಿದ್ದೇ. ಈ ದಿನ ಅವರಿಲ್ಲ ಎಂದರೆ ನಂಬಲಸಾಧ್ಯವಾಗಿದೆ. ಈ ದಿನ ಯುವರತ್ನನನ್ನು ಕಳೆದುಕೊಂಡು ನಮ್ಮ ಕರುನಾಡು ಬರಿದಾಗಿದೆ,‘ ಎಂದು ದೇವೇಗೌಡರು ಬೇಸರ ವ್ಯಕ್ತಪಡಿಸಿದ್ದಾರೆ.

‘ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ದೇವರು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದುಃಖ ಬರಿಸುವ ಶಕ್ತಿ ತುಂಬಲಿ,’ ಎಂದು ಹೇಳಿದ್ದಾರೆ.

ಇವುಗಳನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.