ಬೆಂಗಳೂರು: ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನರಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ.
ಮಾಜಿ ಕೇಂದ್ರ ಸಚಿವರಾದ ಜಸ್ವಂತ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವುಂಟಾಯಿತು. ಜಸ್ವಂತ್ ಸಿಂಗ್ ಅವರು ಈ ದೇಶ ಕಂಡ ಒಬ್ಬ ಪ್ರಾಮಾಣಿಕ ವ್ಯಕ್ತಿ , ಈ ದಿನ ನಾನು ಒಬ್ಬ ಅತ್ಯುತ್ತಮ ಸ್ನೇಹಿತನನ್ನು ಕಳೆದುಕೊಂಡಿದ್ದೀನಿ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಹಾಗೂಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದಿದ್ದಾರೆ.
ಮಾಜಿ ಸಚಿವ ಜಸ್ವಂತ್ ಸಿಂಗ್ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದರು. ಜಸ್ವಂತ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.