ಕೋಲಾರ: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ (96) ಭಾನುವಾರ ಪಾರ್ಶ್ವವಾಯುಗೆ ತುತ್ತಾಗಿದ್ದು, ಅವ
ರನ್ನು ಇಲ್ಲಿನ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಮನೆಯಲ್ಲಿದ್ದ ಅವರು ಬೆಳಿಗ್ಗೆ ಪಾರ್ಶ್ವವಾಯುಗೆ ತುತ್ತಾಗಿದ್ದು, ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ. ನಂತರ ಅವರನ್ನು ಜಿಲ್ಲಾ ಕೇಂದ್ರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಾಲಪ್ಪ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಅವರ ಸಂಬಂಧಿ ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.