ಬೆಂಗಳೂರು: ಭಾರತಕ್ಕೆ ಟ್ರಂಪ್ ಭೇಟಿ ವಿರೋಧಿಸಿ ಮೈಸೂರು ಹಾಗೂ ಕಲ್ಬುರ್ಗಿ ಜಿಲ್ಲೆಗಳಲ್ಲಿ ಸೋಮವಾರ ರೈತರು ಹಾಗೂ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಅಖಿಲ ಭಾರತ ಕಿಸಾನ್ ಸಭಾ ಕಾರ್ಯಕರ್ತರು ಹಾಗೂ ರೈತರು ಕಲಬುರ್ಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರೆ,ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ , ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್, ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಟ್ರಂಪ್ ಭಾರತಕ್ಕೆ ಭೇಟಿ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಗೋಬ್ಯಾಕ್ ಮೋದಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.