ADVERTISEMENT

ರಾಜ್ಯದ ವಿವಿಧೆಡೆ ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 19:25 IST
Last Updated 9 ಅಕ್ಟೋಬರ್ 2020, 19:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: 'ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಅ.10ರಿಂದ 13ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ' ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT