ADVERTISEMENT

ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ನಾಲ್ವರ ನಾಮ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 21 ಜೂನ್ 2025, 23:59 IST
Last Updated 21 ಜೂನ್ 2025, 23:59 IST
<div class="paragraphs"><p>ಮುಖ್ಯಮಂತ್ರಿ&nbsp;ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನಾಲ್ವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ADVERTISEMENT

ನಿವೃತ್ತ ಐಜಿಪಿ ಚನ್ನಪಟ್ಟಣದ ಕೆ. ಅರ್ಕೇಶ್, ಮೈಸೂರಿನ ವಕೀಲರಾದ ಶಿವಣ್ಣ ಗೌಡ, ಮಂಗಳೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಬಿ. ಸುಮನಾ ಮತ್ತು ನಿವೃತ್ತ ಪ್ರಾಂಶುಪಾಲ, ಧಾರವಾಡದ ಸಿ.ಎಂ. ಕುಂದಗೋಳ ಅವರ ಹೆಸರನ್ನು ಮುಖ್ಯಮಂತ್ರಿ ನಾಮನಿರ್ದೇಶನ ಮಾಡಿದ್ದಾರೆ.

ಆಯೋಗದ ಅಧ್ಯಕ್ಷರನ್ನಾಗಿ ಮಾಜಿ ಅಡ್ವೊಕೇಟ್‌ ಜನರಲ್‌ ಮಧುಸೂದನ್‌ ಆರ್‌. ನಾಯಕ್ ಅವರನ್ನು ನೇಮಿಸಿ ಸರ್ಕಾರ ಜನವರಿ 31ರಂದು ಆದೇಶ ಹೊರಡಿಸಿತ್ತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.