ಫಾಕ್ಸ್‌ಕಾನ್
ಬೆಂಗಳೂರು: ದೇವನಹಳ್ಳಿ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಫಾಕ್ಸ್‌ಕಾನ್ ಘಟಕ ಉದ್ಘಾಟನೆಗೆ ಸಿದ್ಧವಾಗಿದ್ದು, ಜೂನ್ ತಿಂಗಳ ಮೊದಲ ವಾರ ಐಫೋನ್‌ಗಳ ಪೂರೈಕೆ ಆರಂಭಿಸಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
ಇದು ಕೇವಲ ಉತ್ಪಾದನಾ ಘಟಕವಲ್ಲ, ಒಂದು ಕಾರ್ಯತಂತ್ರದ ಬದಲಾವಣೆಯ ಸಂಕೇತ. ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಹಾಗೂ ಸುಂಕದ ಒತ್ತಡಗಳ ನಡುವೆಯೂ ಭಾರತವು ಆ್ಯಪಲ್‌ನ ಆದ್ಯತೆಯ ಉತ್ಪಾದನಾ ಕೇಂದ್ರವಾಗಿ ಬದಲಾಗುತ್ತಿದೆ. ಈ ಬೆಳವಣಿಗೆ ಜಾಗತಿಕ ಉತ್ಪಾದನೆಯಲ್ಲಿ ಕರ್ನಾಟಕದ ಸ್ಥಾನವನ್ನು ಬಲಪಡಿಸುತ್ತದೆ. ಪಾಲುದಾರರ ಹಿತಾಸಕ್ತಿಗೆ ಧಕ್ಕೆಯಾಗದ ರೀತಿಯಲ್ಲಿ ಹೆಚ್ಚಿನ ವಿದೇಶಿ ಹೂಡಿಕೆಗೆ ಬಾಗಿಲು ತೆರೆಯುತ್ತದೆ ಎಂದಿದ್ದಾರೆ.
‘ಜೂನ್ ನಂತರ ಅಮೆರಿಕದಲ್ಲಿ ಮಾರಾಟವಾಗುವ ಹೆಚ್ಚಿನ ಐಫೋನ್‌ಗಳು ಭಾರತದಲ್ಲಿ ತಯಾರಿಸಲ್ಪಡುತ್ತವೆ’ ಎನ್ನುವುದನ್ನು ಆ್ಯಪಲ್ ಸಿಇಒ ಟಿಮ್‌ಕುಕ್ ಅವರು ದೃಢಪಡಿಸಿದ್ದಾರೆ. ಒಬ್ಬ ಕನ್ನಡಿಗನಾಗಿ, ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ’ ಎಂದು ಸಚಿವ ಪಾಟೀಲ ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.