ವರ್ತೂರ್ ಪ್ರಕಾಶ್
ಬೆಂಗಳೂರು: ಚಿನ್ನ ಖರೀದಿಸುವ ನೆಪದಲ್ಲಿ ಆಭರಣ ಅಂಗಡಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣದಲ್ಲಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದ್ದು, ಇದೇ ಪ್ರಕರಣದಲ್ಲಿ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅವರು ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಾಗಲಗುಂಟೆ ನಿವಾಸಿ ಶ್ವೇತಾ ಗೌಡ ಅವರನ್ನು ಬಂಧಿಸಿದ್ದರು. ಅವರಿಂದ ಚಿನ್ನ, ಕಾರು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿತ್ತು. ಆರೋಪಿ ವಿಚಾರಣೆ ವೇಳೆ ವರ್ತೂರ್ ಪ್ರಕಾಶ್ ಅವರ ಹೆಸರು ಬಾಯ್ಬಿಟ್ಟಿದ್ದರು. ಆರೋಪಿ ಹೇಳಿಕೆ ಆಧರಿಸಿ ಪ್ರಕಾಶ್ ಅವರಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಮಂಗಳವಾರ ಬೆಳಿಗ್ಗೆ ವಿಚಾರಣೆಗೆ ಪ್ರಕಾಶ್ ಹಾಜರಾಗಿದ್ದು, ಎಸಿಪಿ ಗೀತಾ ಅವರ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಚಿವರಿಗೆ ಕೆಲವು ಪ್ರಶ್ನೆಗಳನ್ನು ಹೇಳಲಾಗುತ್ತಿದೆ ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.