ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಪ್ರಯಾಣ ಉಚಿತ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 16:44 IST
Last Updated 13 ಜುಲೈ 2021, 16:44 IST
   

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಾರಿಗೆ ಸಂಸ್ಥೆಗಳ ಬಸ್‌ನಲ್ಲಿ ಉಚಿತವಾಗಿ ತೆರಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಜುಲೈ 19 ಮತ್ತು 22ರಂದು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ಗಳಲ್ಲಿ ತೆರಳಬಹುದಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT