ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2019, 19:01 IST
Last Updated 19 ಮಾರ್ಚ್ 2019, 19:01 IST

ಬೆಂಗಳೂರು: ವಿದ್ಯಾರ್ಥಿ ರಿಯಾಯಿತಿ ಪಾಸ್‌ ಹೊಂದಿರುವ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ವರೆಗೂ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೌಲಭ್ಯ ಕಲ್ಪಿಸಿದೆ.

ಮಾರ್ಚ್‌ 21ರಿಂದ ಏಪ್ರಿಲ್‌ 4ರ ವರೆಗೆ ನಡೆಯುವ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬಸ್‌ ಪಾಸ್‌ ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗೆ ಹೋಗಬಹುದು ಮತ್ತು ವಾಸಸ್ಥಳಕ್ಕೆ ಹಿಂದಿರುಗಬಹುದಾಗಿದೆ. ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT