ADVERTISEMENT

‘ಕೊಳೆಗೇರಿ ಮಕ್ಕಳಿಗೆ ಶಿಕ್ಷಣ: ಸರ್ಕಾರದಿಂದ ಅಗತ್ಯ ಸಹಕಾರ’

ಬೆಂಗಳೂರಿನ ಕೊಳೆಗೇರಿ ಮಕ್ಕಳಿಗೆ ಶಿಕ್ಷಣ: ನಿರ್ಮಲಾನಂದನಾಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2020, 21:28 IST
Last Updated 23 ಡಿಸೆಂಬರ್ 2020, 21:28 IST
ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಬುಧವಾರ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು ಪ್ರಜಾವಾಣಿ ಚಿತ್ರ
ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಬುಧವಾರ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಸರ್ಕಾರದಿಂದ ಜಾಗ ಸಿಕ್ಕಿದರೆ ಬೆಂಗಳೂರಿನ ಕೊಳೆಗೇರಿಗಳಲ್ಲಿರುವ ಮಕ್ಕಳಿಗೆ ಆದಿಚುಂಚನಗಿರಿ ಮಠದಿಂದ ಉಚಿತ ಶಿಕ್ಷಣ ನೀಡುವುದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಬುಧವಾರ ಭೇಟಿ ನೀಡಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ADVERTISEMENT

25ರಂದು ರೈತ ದಿನಾಚರಣೆ: ‘ಇದೇ 25ರಂದು ವಾಜಪೇಯಿ ಜನ್ಮದಿನ. ಅಂದು ರೈತರ ದಿನವಾಗಿ ಜನ್ಮದಿನ ಆಚರಿಸಲಿದ್ದು, ಎಲ್ಲ 30 ಜಿಲ್ಲೆಗಳಲ್ಲೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಕುರಿತು ತಿಳಿವಳಿಕೆ ಮೂಡಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.