ವಿಶ್ವವಿದ್ಯಾಲಯ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥರಾವ್ ಅವರ ಪುತ್ರ ಅಭಿಜಯ ಅವರಿಗೆ ಆರ್.ವಿ ವಿಶ್ವವಿದ್ಯಾಲಯವು ಪದವಿ ತರಗತಿಗೆ ಉಚಿತ ಪ್ರವೇಶ ನೀಡಿದೆ.
ಅಭಿಜಯ ಅವರು ಆರ್.ವಿ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವಿ ತರಗತಿಗೆ ಸೇರಿಕೊಂಡಿದ್ದಾರೆ. ಉಚಿತ ಪ್ರವೇಶ ನೀಡಿರುವ ಆರ್.ವಿ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್‌ಗೆ ಸಂಸದ ತೇಜಸ್ವಿ ಸೂರ್ಯ ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.