ADVERTISEMENT

ಪಾಸ್ ಇಲ್ಲದ ವಿದ್ಯಾರ್ಥಿಗಳಿಗೂ ಬಸ್ ಪ್ರಯಾಣ ಉಚಿತ

​ಪ್ರಜಾವಾಣಿ ವಾರ್ತೆ
Published 8 ಜೂನ್ 2019, 18:53 IST
Last Updated 8 ಜೂನ್ 2019, 18:53 IST

ಬೆಂಗಳೂರು: ಬಸ್ ಪಾಸ್ ಇಲ್ಲದ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಕೂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಇದೇ 30ರವರೆಗೆ ಉಚಿತವಾಗಿ ಪ್ರಯಾಣಿಸಲು ನಿಗಮ ಅವಕಾಶ ಕಲ್ಪಿಸಿದೆ.

2018–19ನೇ ಸಾಲಿನ ಬಸ್ ಪಾಸ್ ಇರುವ ವಿದ್ಯಾರ್ಥಿಗಳು ಹಳೇ ಪಾಸ್‌ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ಇದೇ 3ರಂದು ಸುತ್ತೋಲೆ ಹೊರಡಿಸಿತ್ತು.

ಆದರೆ,ಕಳೆದ ಸಾಲಿನಲ್ಲಿ ಪಾಸ್ ಪಡೆಯದ, ಹೊಸದಾಗಿ ಶಾಲಾ–ಕಾಲೇಜಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಅನನುಕೂಲ ಆಗುತ್ತಿರುವುದರಿಂದ ಪಾಸ್ ಇಲ್ಲದವರೂ ಶಾಲಾ–ಕಾಲೇಜಿನ ಬೋಧನಾ ಶುಲ್ಕದ ರಸೀದಿ ಅಥವಾ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಿಗಮದ ಮುಖ್ಯ ಸಂಚಾರವ್ಯವಸ್ಥಾಪಕ ರಾಜೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.