ADVERTISEMENT

ಉಚಿತ ಎಂಬ ಶಬ್ದವೇ ಅಪಾಯಕಾರಿ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2025, 15:53 IST
Last Updated 28 ಮಾರ್ಚ್ 2025, 15:53 IST
<div class="paragraphs"><p>ಆರ್.ವಿ.ದೇಶಪಾಂಡೆ</p></div>

ಆರ್.ವಿ.ದೇಶಪಾಂಡೆ

   

ದಾಂಡೇಲಿ: ‘ಜನರಿಗೆ ಯಾವುದನ್ನೂ ಉಚಿತವಾಗಿ ನೀಡಬಾರದು. ಉಚಿತ ಎಂಬ ಶಬ್ದವೇ ಅಪಾಯಕಾರಿ. ಯಾವುದೇ ಸೇವೆಯಾದರೂ ಅದಕ್ಕೆ ಶುಲ್ಕ ನಿಗದಿಪಡಿಸಬೇಕು’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಹೇಳಿದರು.

ತಾಲ್ಲೂಕಿನ ಅಂಬೆವಾಡಿಯಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಒದಗಿಸಲಾಗಿದೆ. ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆ ಬಂದಿತ್ತು. ಎಲ್ಲವನ್ನೂ ಉಚಿತ ನೀಡುತ್ತ ಹೋದರೆ ಸಂಸ್ಥೆ ನಿರ್ವಹಣೆ ಸಾಧ್ಯವಾಗದು’ ಎಂದರು.

ADVERTISEMENT

‘ಸಾರಿಗೆ ಸಂಸ್ಥೆ ಪ್ರತಿ ವರ್ಷ ಹೊಸ ಬಸ್ ಖರೀದಿ, ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳುವುದು ಅನಿವಾರ್ಯ. ಪ್ರಯಾಣ ದರ ಹೆಚ್ಚಿಸಿದರೆ ವಿರೋಧ ವ್ಯಕ್ತವಾಗುತ್ತದೆ. ಉಚಿತವಾಗಿ ಅವಕಾಶ ನೀಡಿದರೆ ಸಂಸ್ಥೆ ನಡೆಸುವುದು ಕಷ್ಟವಾಗುತ್ತದೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.