ADVERTISEMENT

ಬಿಜೆಪಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಡಾ.ಜಿ. ಪರಮೇಶ್ವರ್

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2018, 5:35 IST
Last Updated 19 ನವೆಂಬರ್ 2018, 5:35 IST
   

ಬೆಂಗಳೂರು: ನಮ್ಮ ಮೈತ್ರಿ ಸರಕಾರದ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಬಿಜೆಪಿ ಪಕ್ಷಕ್ಕಿಲ್ಲ.‌ ನಮ್ಮ ಸರಕಾರರೈತರ 49 ಸಾವಿರ ಕೋಟಿ ರು. ಸಾಲಮನ್ನಾ ಮಾಡುತ್ತಿದೆ. ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕಿದರು. ಇವರ ಪಕ್ಷಕ್ಕೆ ರೈತ ಬಗ್ಗೆ ಮಾತನಾಡುವ ಅಧಿಕಾರವಿಲ್ಲ.‌ ಸಿಎಂ ಕುಮಾರಸ್ವಾಮಿ ಅವರು ರೈತರ ಬಗ್ಗೆ ಹಗುರವಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಹಣ ಪಾವತಿ ವಿಚಾರವಾಗಿ ಸಿಎಂ ಅವರು ನಾಳೆ ರೈತರ ಸಭೆ ಕರೆದಿದ್ದಾರೆ. ಈ ವೇಳೆ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಇಂದು ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದರು.

ಇನ್ನು ಆ್ಯಂಬಿಟೆಂಡ್‌ ಪ್ರಕರಣದ ಬಗ್ಗೆ ಮಾತನಾಡಿ, ತನಿಖೆ ಕೈಗೊಳ್ಳಲಾಗಿದೆ. ಆರೋಪಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ತನಿಖೆ ಮುಗಿಯುವವರೆಗೂ ಏನೂ ಹೇಳಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸಿಐಡಿಗೆ ವಹಿಸುವ ಸಂದರ್ಭ ಬಂದಾಗ ನೋಡೋಣ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.