ಜಿ. ಪರಮೇಶ್ವರ, ಗೃಹ ಸಚಿವ
ಬೆಂಗಳೂರು: ‘ದೆಹಲಿ ಕರ್ನಾಟಕ ಭವನ ಉದ್ಘಾಟನೆಗೆ ಆಹ್ವಾನ ಇರಲಿಲ್ಲ. ಹಾಗಾಗಿ, ಹೋಗಲಿಲ್ಲ. ನಾನು ಉಪ ಮುಖ್ಯಮಂತ್ರಿಯಾಗಿದ್ದಾಗ ಶಂಕುಸ್ಥಾಪನೆ ನೆರವೇರಿಸಿದ್ದೆ. ಈಗ ಅವರಿಗೆ ನೆನಪಾಗಲಿಲ್ಲ ಎನಿಸುತ್ತದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ನಮ್ಮೆಲ್ಲರ ಪ್ರತಿನಿಧಿಯಾಗಿ ಮುಖ್ಯಮಂತ್ರಿ ಹೋಗಿದ್ದಾರೆ. ಉಪ ಮುಖ್ಯಮಂತ್ರಿ, ಇತರೆ ಸಚಿವರ ದೆಹಲಿ ಭೇಟಿ, ವರಿಷ್ಠರ ಜತೆಗಿನ ಚರ್ಚೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಅಥವಾ ಅವರೇ ಮುಂದುವರಿಯಬೇಕು ಎನ್ನುವುದು ಎಲ್ಲ ಕಾಲಕ್ಕೂ ಇರುವ ಸಹಜ ಬೇಡಿಕೆ. ಅದರಲ್ಲಿ ವಿಶೇಷ ಏನೂ ಇಲ್ಲ. ಪಕ್ಷದ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
ಸದನದಲ್ಲಿ ಮಧುಬಲೆ ವಿಚಾರ ಎತ್ತಿದ್ದ ಸಹಕಾರ ಸಚಿವ ಕೆ.ಎನ್. ರಾಜಣ್ಣ ನಂತರ ತಣ್ಣಗಾಗಿದ್ದಾರಲ್ಲಾ ಎಂಬ ಪ್ರಶ್ನೆಗೆ, ‘ಸಿಐಡಿ ವಿಚಾರಣೆ ನಡೆಸುತ್ತಿದೆ. ಆ ಕುರಿತು ಹೆಚ್ಚಿನ ಮಾಹಿತಿ ಇಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.