ADVERTISEMENT

ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುವ ಭಯದಲ್ಲಿದ್ದಾರೆ: ಜಿ.ಟಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2024, 7:21 IST
Last Updated 2 ಏಪ್ರಿಲ್ 2024, 7:21 IST
<div class="paragraphs"><p>ಜಿ.ಟಿ. ದೇವೇಗೌಡ</p></div>

ಜಿ.ಟಿ. ದೇವೇಗೌಡ

   

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕ ಸ್ಥಾನಗಳಿಸದಿದ್ದರೆ ತಾವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಮಂಗಳವಾರ ನಡೆಯುತ್ತಿರುವ ಬಿಜೆಪಿ-ಜೆಡಿಎಸ್‌ ಜಂಟಿ ಕೋರ್‌ ಕಮಿಟಿ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ʼಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕಾದರೆ ವರುಣಾ ಕ್ಷೇತ್ರದಲ್ಲಿ 60,000 ಮತಗಳ ಮುನ್ನಡೆ ಕೊಡಿ ಎಂದು ಸಿದ್ದರಾಮಯ್ಯ ಸೋಮವಾರ ಮನವಿ ಮಾಡಿದ್ದಾರೆ. ಇದರ ಹಿಂದೆ ಅಧಿಕಾರ ಕಳೆದುಕೊಳ್ಳುವ ಭಯವಿದೆʼ ಎಂದರು.

ADVERTISEMENT

'ಸಿದ್ದರಾಮಯ್ಯ ಅವರು ಅವರ ಮನಸ್ಸಿನಲ್ಲಿ ಇರುವುದನ್ನು ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ, ನಾಲ್ವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಕಾಂಗ್ರೆಸ್‌ ಪಕ್ಷದಲಿ ಒಂದು ವರ್ಷದಿಂದ ಚರ್ಚೆ ನಡೆಯುತ್ತಿದೆ. ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುತ್ತಾರೆ ಎಂದು ಅವರ ಪಕ್ಷದವರೇ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಈ ಚುನಾವಣೆಯಲ್ಲಿ ಬಹುಮತ ಬಂದರೆ ನಾನು ಉಳಿಯುತ್ತೇನೆ, ಇಲ್ಲವಾದರೆ ಕೆಳಕ್ಕಿಳಿಸುತ್ತಾರೆ ಎಂಬ ಸಂದೇಶವನ್ನು ಮುಖ್ಯಮಂತ್ರಿಯವರು ತಮ್ಮ ಭಾಷಣದಲ್ಲಿ ನೀಡಿದ್ದಾರೆ' ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸುವುದಕ್ಕಾಗಿ ಅಮಿತ್‌ ಶಾ ಜಂಟಿ ಸಭೆ ನಡೆಸುತ್ತಿದ್ದಾರೆ. ಅಲ್ಲಿ ಹಲವು ವಿಷಯಗಳ ಕುರಿತು ಚರ್ಚೆಯಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.