ಬೆಂಗಳೂರು: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ವಿರುದ್ಧ ಸಂಜ್ಞೆಯ ಅಪರಾಧ ಎಂದು ಪರಿಗಣಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.
ಕರ್ತವ್ಯ ನಿರ್ವಹಣೆ ವೇಳೆ ಈ ಕೃತ್ಯ ಎಸಗಲಾಗಿದೆ ಎಂದಾದರೆ ವಿಚಾರಣೆಗೆ ಪೂರ್ವಾನುಮತಿ ಕಡ್ಡಾಯ ಎಂಬ ಸುಪ್ರೀಂ ಕೋರ್ಟ್ ತೀರ್ಪುನ್ನು ಅರ್ಜಿದಾರರಾದ ಮೊಹಂತಿ ಪರ ವಕೀಲರು ಉಲ್ಲೇಖಿಸಿದರು.
ಈ ವಾದ ಪರಿಗಣನೆಗೆ ಅರ್ಹವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಜಿ. ನರೇಂದರ್ ಅವರು, ವಿಶೇಷ ನ್ಯಾಯಾಲಯದ ಆದೇಶ ಮತ್ತು ಪ್ರಕರಣದ ಸಂಬಂಧ ವಿಚಾರಣೆಗೆ ತಡೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.