ADVERTISEMENT

ರಾಜ್ಯದ 237 ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2023, 16:03 IST
Last Updated 26 ಸೆಪ್ಟೆಂಬರ್ 2023, 16:03 IST
‘ಗಾಂಧಿ ಗ್ರಾಮ ಪುರಸ್ಕಾರ’ ಪಡೆದ ಹೊನ್ನೇಕೂಡಿಗೆ ಗ್ರಾಮ ಪಂಚಾಯಿತಿ.
‘ಗಾಂಧಿ ಗ್ರಾಮ ಪುರಸ್ಕಾರ’ ಪಡೆದ ಹೊನ್ನೇಕೂಡಿಗೆ ಗ್ರಾಮ ಪಂಚಾಯಿತಿ.   

ಬೆಂಗಳೂರು: ಪಂಚಾಯತ್ ರಾಜ್ ಇಲಾಖೆ 2022–23ನೇ ಸಾಲಿನ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ 233 ಹಾಗೂ ‘ವಿಶೇಷ ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ನಾಲ್ಕು ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿದೆ. 

ಉಡುಪಿ ಜಿಲ್ಲೆಯ ಹೊಸಾಡು, 80 ಬಡಗಬೆಟ್ಟು, ಉತ್ತರ ಕನ್ನಡ ಜಿಲ್ಲೆಯ ತಟ್ಟೇಗೇರಿ, ಬೆಳವಟಿಗೆ ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾದ ಪಂಚಾಯತಿಗಳು. 

ಪುರಸ್ಕಾರಕ್ಕೆ ಆಯ್ಕೆಯಾದ ಎಲ್ಲ 237 ಪಂಚಾಯತಿಗಳಿಗೂ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಕಾರ್ಯಕ್ರಮದಲ್ಲಿ  ಅ.2ರಂದು ನಡೆಯುವ ಕಾರ್ಯಕ್ರಮದಲ್ಲಿ ತಲಾ ₹ 5 ಲಕ್ಷ ನಗದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ. ಆಯ್ಕೆಯಾದ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿ ಸ್ವೀಕರಿಸಬೇಕು ಎಂದು ಸೂಚಿಸಲಾಗಿದೆ.  

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.