ADVERTISEMENT

ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ: ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಕಾರ

ಅಂಜುಮನ್ ಮನವಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 21:30 IST
Last Updated 30 ಆಗಸ್ಟ್ 2022, 21:30 IST
ಹೈಕೋರ್ಟ್
ಹೈಕೋರ್ಟ್    

ಧಾರವಾಡ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಹಾಗೂ ಅನ್ಯ ಉದ್ದೇಶಕ್ಕೆ ನೀಡಬಾರದು ಎಂಬ ಅಂಜುಮನ್ ಸಂಸ್ಥೆಯ ಕೋರಿಕೆಗೆ ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ತೀರ್ಮಾನದ ವಿರುದ್ಧ ಅಂಜುಮನ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ ಎಸ್. ಕಿಣಗಿ ಅವರು ಬೆಂಗಳೂರಿನ ಈದ್ಗಾ ಮೈದಾನ ವಿವಾದ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ಇಲ್ಲಿನ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರು.

ADVERTISEMENT

ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರತಿ ಕೈಸೇರಿದ ನಂತರ, ಮಂಗಳವಾರ ರಾತ್ರಿ 10ಕ್ಕೆ ವಿಚಾರಣೆ ಆರಂಭಗೊಂಡಿತು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು, ಈ ಕುರಿತಂತೆ ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದರು. ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದರು.

ಅರ್ಜಿದಾರರ ಪರ ಸಾದಿಕ್ ಗೂಡೂವಾಲೆ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.