ಬೆಂಗಳೂರು: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
ಸೂಕ್ಷ್ಮಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಭದ್ರತೆಯಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳೂ ನಡೆಯಬಾರದು ಎಂದು ಸಚಿವರು ಸೂಚಿಸಿದರು.
ಇದೇ ವೇಳೆ ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಮಾಹಿತಿ ಪಡೆದುಕೊಂಡರು. ಚಾಮರಾಜಪೇಟೆ ಮೈದಾನ ಸುತ್ತಮುತ್ತ ಭದ್ರತೆ ಹೆಚ್ಚಿಸಬೇಕು ಎಂದು
ಸೂಚಿಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ವಿವಿಧ ವಿಭಾಗಗಳ ಉಪ ಪೊಲೀಸ್ ಆಯಕ್ತರು ಹಾಗೂ ಇನ್‌ಸ್ಪೆಕ್ಟರ್‌ಗಳು ಸಭೆಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.