ADVERTISEMENT

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮತ್ತೆ ನಾಲ್ವರಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2024, 15:13 IST
Last Updated 16 ಸೆಪ್ಟೆಂಬರ್ 2024, 15:13 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಇನ್ನೂ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್) ಶ್ರೀಕಾಂತ್ ಪಂಗಾರ್ಕರ್ (48), ಶಿಕಾರಿಪುರದ ಸುನಿತ್ ಕುಮಾರ್ (42) ಮತ್ತು ಮಹಾರಾಷ್ಟ್ರ ಸತಾರದ ಸುಧನ್ವ ಗೋಂದಲೇಕರ್ (43) ಜಾಮೀನು ಪಡೆದವರು.

ADVERTISEMENT

ಇದರೊಂದಿಗೆ ಪ್ರಕರಣದ 18 ಆರೋಪಿಗಳ ಪೈಕಿ 8 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಈ ಹಿಂದೆ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.

ಅರ್ಜಿದಾರರ ಪರ ಅಮರ್ ಕೊರಿಯಾ ಹಾಗೂ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.