ADVERTISEMENT

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್‌ ಸೇರ್ಪಡೆ: ಕಾದು ನೋಡಿ– ಡಿಕೆಶಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 19:42 IST
Last Updated 15 ಮಾರ್ಚ್ 2021, 19:42 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ನಟ ಶಿವರಾಜ್‌ಕುಮಾರ್ ಮಾತುಕತೆ ನಡೆಸಿದರು
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ನಟ ಶಿವರಾಜ್‌ಕುಮಾರ್ ಮಾತುಕತೆ ನಡೆಸಿದರು   

ಬೆಂಗಳೂರು: ‘ನಟ ಶಿವರಾಜ್‌ಕುಮಾರ್‌ ಅವರ ಪತ್ನಿ ಗೀತಾ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಶಿವರಾಜ್‌ಕುಮಾರ್ ಜತೆ ಸೋಮವಾರ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್‌, ‘ಶಿವರಾಜ್ ಕುಮಾರ್ ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ’ ಎಂದರು.

‘ಶಿವರಾಜ್‌ಕುಮಾರ್‌ ಕುಟುಂಬದ ಮೇಲೆ ನಮಗೆ ಅಪಾರ ಗೌರವವಿದೆ. ನಮಗೂ ಅವರ ಜತೆ ವೈಯಕ್ತಿಕ ಸಂಬಂಧಗಳಿವೆ. ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಮಾತನಾಡುವ ಹಕ್ಕಿದೆ. ಅವರು ಮಾತನಾಡಿದ್ದಾರೆ. ಸಂದರ್ಭ ಬಂದಾಗ ಗೀತಾ ಶಿವರಾಜ್‌ಕುಮಾರ್ ಕೂಡಾ ಮಾತನಾಡುತ್ತಾರೆ’ ಎಂದರು.

ADVERTISEMENT

ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಹಿರಿಯ ನಾಯಕರ ಜತೆ ಚರ್ಚಿಸಿದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.