ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಮೊದಲ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ಸೋಮವಾರದಿಂದ (ಸೆ. 15) ಆರಂಭವಾಗಲಿದೆ. ಒಟ್ಟು 45 ಕೆಲಸದ ದಿನ ನಡೆಯಲಿದೆ.
ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಮಾಜಿ ದೇವದಾಸಿಯರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಮರು ಸಮೀಕ್ಷೆ ನಡೆಯಲಿದೆ. ಎರಡೂ ಸಮೀಕ್ಷೆಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ನಡೆಸಲಿದೆ.
ಎರಡೂ ಸಮೀಕ್ಷೆಗಳನ್ನು ಮೊಬೈಲ್ ಆ್ಯಪ್ ಮೂಲಕ ನಡೆಸಲು ಪ್ರತ್ಯೇಕ ವೆಬ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಮೊದಲ ಸಮೀಕ್ಷೆಯನ್ನು ತಾಲ್ಲೂಕು, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಯನ್ನು ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.