
ನಾಯಕನಹಟ್ಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿರುವ ಜನೌಷಧಿ ಕೇಂದ್ರದ ಬಳಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದರು
ಬೆಂಗಳೂರು: ‘ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ರಾಜ್ಯ ಸರ್ಕಾರದ ಲೂಟಿಕೋರ ನೀತಿಗೆ ಹೈಕೋರ್ಟ್ ತಡೆ ನೀಡಿದ್ದು, ಇದರಿಂದ ಸರ್ಕಾರಕ್ಕೆ ಮುಖಭಂಗವಾಗಿದೆ’ ಎಂದು ಬಿಜೆಪಿ ಹೇಳಿದೆ.
‘ಬಿಜೆಪಿ ಹೋರಾಟಕ್ಕೆ ಜಯ ಸಿಕ್ಕಿದ್ದು, ಮೆಡಿಕಲ್ ಮಾಫಿಯಾಗೆ ಹೈಕೋರ್ಟ್ ಆದೇಶದಿಂದ ಕಡಿವಾಣ ಬಿದ್ದಿದೆ’ ಎಂದು ಬಿಜೆಪಿ ‘ಎಕ್ಸ್’ನಲ್ಲಿ ತಿಳಿಸಿದೆ.
‘ಬಡವರ್ಗದ ಜನರಿಗೆ ಕೈಗೆಟುಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮೋದಿ ಸರ್ಕಾರ ಜಾರಿಗೆ ತಂದಿತ್ತು. ಕಾಂಗ್ರೆಸ್ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚಲು ವಿನಾಕಾರಣ ಆದೇಶ ಹೊರಡಿಸಿತ್ತು. ರಾಜಕಾರಣಕ್ಕೆ ಜನಪರ ಯೋಜನೆಗಳನ್ನು ನಿಲ್ಲಿಸುವ ದುರ್ಬದ್ಧಿಯನ್ನು ಕಾಂಗ್ರೆಸ್ ಇನ್ನಾದರೂ ಬಿಡಬೇಕು’ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.