ADVERTISEMENT

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಗೆ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2025, 14:18 IST
Last Updated 3 ಏಪ್ರಿಲ್ 2025, 14:18 IST
<div class="paragraphs"><p>ರಾಹುಲ್ ಗಾಂಧಿ, ಸಿದ್ದರಾಮಯ್ಯ</p></div>

ರಾಹುಲ್ ಗಾಂಧಿ, ಸಿದ್ದರಾಮಯ್ಯ

   

ನವದೆಹಲಿ: ಕರ್ನಾಟಕದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ ಧ್ವನಿ ಎತ್ತಿದ್ದರು.

ADVERTISEMENT

ರಾಹುಲ್ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ, ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ ಪಾಲ್ಗೊಂಡು ಚರ್ಚಿಸಿದರು.

ಸಂಬಂಧಿತ ಸಂಸ್ಥೆಗಳಿಂದ ಶೇ 5ರಷ್ಟು ಸೆಸ್ ಸಂಗ್ರಹಿಸಿ ಉಳಿದ ಅಗತ್ಯ ಹಣವನ್ನು ಸರ್ಕಾರವೇ ಭರಿಸಿ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸಲು, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸಮಗ್ರ ಅಂಶಗಳನ್ನು ಒಳಗೊಂಡ ಮಸೂದೆಯನ್ನು ಸಂಪುಟದ ಮುಂದೆ ಮಂಡಿಸಲು ತೀರ್ಮಾನಿಸಲಾಗಿದೆ.

ಗಿಗ್ ಕಾರ್ಮಿಕರ ವಲಯದ ಪರವಾಗಿ ರಾಜ್ಯದ ರಕ್ಷಿತಾ ದೇವ್, ಹೈದರಾಬಾದ್‌ನ ಶೇಖ್ ಸಲಾಹುದ್ದೀನ್, ನಿಖಿಲ್ ದೇವ್ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.