ADVERTISEMENT

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಮೆಗ್ಗಾನ್‌ ಆಸ್ಪತ್ರೆ ವಾರ್ಡ್‌ ಬಾಯ್‌ ಮತ್ತು ಸ್ನೇಹಿತರಿಂದ ಕೃತ್ಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 19:31 IST
Last Updated 6 ಡಿಸೆಂಬರ್ 2020, 19:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯೊಂದಿಗೆ ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದ ಬಾಲಕಿ ಮೇಲೆ ಆಸ್ಪ‍ತ್ರೆಯ ವಾರ್ಡ್ ಬಾಯ್ ಮನೋಜ್‌ ಮತ್ತು ಆತನ ಸ್ನೇಹಿತರು ಶನಿವಾರ ತಡರಾತ್ರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಅನಾರೋಗ್ಯದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯನ್ನು ನೋಡಿಕೊಳ್ಳುವ ಸಲುವಾಗಿ ಬಾಲಕಿ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದಳು. ಈ ಸಮಯದಲ್ಲಿ ವಾರ್ಡ್ ಬಾಯ್ ಪರಿಚಯವಾಗಿತ್ತು. ಶಿವಮೊಗ್ಗದಲ್ಲಿ ನಡೆದ ಘರ್ಷಣೆಯ ಕಾರಣ ನಿಷೇಧಾಜ್ಞೆ ವಿಧಿಸಿರುವುದರಿಂದ ಹೋಟೆಲ್‌ಗಳು ಬಂದ್ ಆಗಿದ್ದು, ಬಾಲಕಿಗೆ ಎಲ್ಲಿಯೂ ಊಟ ಸಿಕ್ಕಿರಲಿಲ್ಲ. ವಾರ್ಡ್ ಬಾಯ್ ಊಟ ಕೊಡಿ
ಸುವುದಾಗಿ ಬಾಲಕಿಯನ್ನು ನಂಬಿಸಿ ಕಾರಿನಲ್ಲಿ ಕರೆದೊಯ್ದು, ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಕೃತ್ಯವನ್ನು ತಾಯಿಗೆ ತಿಳಿಸಿದ್ದಾಳೆ. ನಂತರ ಆಸ್ಪತ್ರೆ ಆವರಣದಲ್ಲಿರುವ ಸಖಿ ಕೇಂದ್ರದವರಿಗೆ ವಿಷಯ ತಿಳಿದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.