ADVERTISEMENT

ಹೆದ್ದಾರಿ ಯೋಜನೆಗಳಿಗೆ ಅನುಮೋದನೆ ನೀಡಿ: ಗಡ್ಕರಿಗೆ ಕಾರಜೋಳ ಮನವಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2025, 14:22 IST
Last Updated 12 ಮಾರ್ಚ್ 2025, 14:22 IST
ಚಿತ್ರದುರ್ಗ ಕ್ಷೇತ್ರದಲ್ಲಿ ಆಗಬೇಕಾದ ಹೆದ್ದಾರಿ ಕಾಮಗಾರಿಗಳ ಕುರಿತು ನಿತಿನ್‌ ಗಡ್ಕರಿ ಅವರಿಗೆ ಗೋವಿಂದ ಕಾರಜೋಳ ಮಾಹಿತಿ ನೀಡಿದರು 
ಚಿತ್ರದುರ್ಗ ಕ್ಷೇತ್ರದಲ್ಲಿ ಆಗಬೇಕಾದ ಹೆದ್ದಾರಿ ಕಾಮಗಾರಿಗಳ ಕುರಿತು ನಿತಿನ್‌ ಗಡ್ಕರಿ ಅವರಿಗೆ ಗೋವಿಂದ ಕಾರಜೋಳ ಮಾಹಿತಿ ನೀಡಿದರು     

ನವದೆಹಲಿ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಳೆದ ಏಳೆಂಟು ತಿಂಗಳಲ್ಲಿ ಹಲವು ಪ್ರಸ್ತಾವಗಳನ್ನು ಸಲ್ಲಿಸಲಾಗಿದೆ. ಅವುಗಳಿಗೆ ಶೀಘ್ರ ಅನುಮೋದನೆ ನೀಡಬೇಕು’ ಎಂದು ಸಂಸದ ಗೋವಿಂದ ಕಾರಜೋಳ ಅವರು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು. 

ಸಚಿವರನ್ನು ಬುಧವಾರ ಇಲ್ಲಿ ಭೇಟಿ ಮಾಡಿದ ಕಾರಜೋಳ, ‘ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ಹಾಗೂ ಹೆದ್ದಾರಿ 150 ಎ ಸಂಧಿಸುವ ಜಾಗದಲ್ಲಿ ಕ್ಲೋವರ್‌ ಲೀಫ್ ಜಂಕ್ಷನ್‌ ನಿರ್ಮಾಣ, ಚಳ್ಳಕೆರೆ ಪಟ್ಟಣದಲ್ಲಿ ಹೆದ್ದಾರಿ ಅಭಿವೃದ್ಧಿ, ಮೂಡಿಗೆರೆ–ಹೊಳಲ್ಕೆರೆ ಹೆದ್ದಾರಿಯನ್ನು ದಾವಣಗೆರೆ ಜಿಲ್ಲೆಯ ಆನಗೋಡು ವರೆಗೆ ವಿಸ್ತರಣೆ, ಹಿರಿಯೂರು ಹತ್ತಿರ ಆದಿವಾಲ–ಪಟ್ರೇಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ, ಚಿಕ್ಕನಹಳ್ಳಿ ಅಂಡರ್‌ಪಾಸ್‌ ಲೋಪ ಸರಿಪಡಿಸಬೇಕು’ ಎಂದು ಅವರು ಒತ್ತಾಯಿಸಿದರು. ಈ ಯೋಜನೆಗಳಿಗೆ ಶೀಘ್ರ ಅನುಮೋದನೆ ನೀಡಿ ಅನುದಾನ ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT