ADVERTISEMENT

ಕೋವಿಡೇತರ ಚಿಕಿತ್ಸೆಗೆ ಆದ್ಯತೆ ನೀಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 16:00 IST
Last Updated 21 ಫೆಬ್ರುವರಿ 2022, 16:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಕೋವಿಡ್‌ ಪ್ರಕರಣಗಳ ಸಂಖ್ಯೆ ನಿಯಂತ್ರಣದಿಂದಾಗಿ ಸೋಂಕಿತರ ಚಿಕಿತ್ಸೆಗೆ ಮೀಸಲಿರಿಸಲಾದ ಆಸ್ಪತ್ರೆಗಳಲ್ಲಿ ಕೋವಿಡೇತರ ಚಿಕಿತ್ಸೆಗಳಿಗೂ ಆದ್ಯತೆ ಒದಗಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಕಂಡಾಗ ಸಿ.ವಿ. ರಾಮನ್ ಆಸ್ಪತ್ರೆ, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ,ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ಸೋಂಕಿತರು ಹಾಗೂ ಸೋಂಕು ಶಂಕಿತರ ಚಿಕಿತ್ಸೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಸಿಗೆಗಳನ್ನು ಮೀಸಲಿರಿಸಲಾಗಿತ್ತು. ಪ್ರಕರಣಗಳ ಸಂಖ್ಯೆ ಇಳಿಕೆ ಕಂಡ ಬಳಿಕ ಹಾಸಿಗೆಗಳ ಸಂಖ್ಯೆಯನ್ನು ಕಡಿತ ಮಾಡಲಾಗಿತ್ತು ಎಂದು ತಿಳಿಸಲಾಗಿದೆ.

ಕೋವಿಡ್ ಪ್ರಕರಣಗಳ ಸಂಖ್ಯೆ ಈಗ ನಿಯಂತ್ರಣಕ್ಕೆ ಬಂದಿರುವುದರಿಂದ ಕೋವಿಡ್ ಜತೆಗೆ ಕೋವಿಡೇತರ ಚಿಕಿತ್ಸೆಗಳನ್ನೂ ಒದಗಿಸಬೇಕು. ಕೋವಿಡೇತರ ಚಿಕಿತ್ಸೆಗಳು ಹಾಗೂ ರೋಗಿಗಳ ದಾಖಲಾತಿ ವಿಳಂಬವಾಗಬಾರದು ಎಂದು ಆಸ್ಪತ್ರೆಗಳಿಗೆ ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.