ADVERTISEMENT

ಗೋದಾವರಿ–ಕಾವೇರಿ ನದಿ ಜೋಡಣೆ: ರಾಜ್ಯದ ಪಾಲು ಹೆಚ್ಚಳಕ್ಕೆ ಡಿಕೆಶಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2025, 15:39 IST
Last Updated 18 ಫೆಬ್ರುವರಿ 2025, 15:39 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

ನವದೆಹಲಿ: ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. 

ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ನಡೆದ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಮಾತನಾಡಿದರು.

ADVERTISEMENT

‘ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಪರಿಗಣಿಸಿ ಅನುಮತಿ ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶನ ನೀಡಬೇಕು. ಇದರಿಂದ ತಮಿಳುನಾಡಿಗೆ ಪ್ರತಿ ತಿಂಗಳ ಲೆಕ್ಕಾಚಾರದ ನೀರು ನೀಡಬಹುದು. ಜತೆಗೆ 400 ಮೆಗಾವಾಟ್‌ ವಿದ್ಯುತ್ ಉತ್ಪಾದನೆ ಮತ್ತು ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ; ಎಂದು ಹೇಳಿದರು.

‘2023-24 ರ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನ ಘೋಷಿಸಿದ್ದರೂ ಈವರೆಗೂ ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಬೇಗನೆ ಯೋಜನೆ ಪೂರ್ಣಗೊಳಿಸಲು ಹಣ ಬಿಡುಗಡೆ ಮಾಡಬೇಕು’ ಎಂದು ಅವರು ಕೋರಿದರು.

ಕಳಸಾ ನಾಲಾ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮತಿ ದೊರಕಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಜಲಶಕ್ತಿ ಸಚಿವಾಲಯವು ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಮೇಲೆ ಒತ್ತಡ ಹೇರಿ, ನದಿ ಜೋಡಣೆ ಯೋಜನೆಯಡಿ ಗೋದಾವರಿ- ಕಾವೇರಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಪಾಲನ್ನು ಮರುಪರಿಶೀಲನೆ ಮಾಡಬೇಕು. ಈ ಯೋಜನೆಯಡಿ ಪ್ರಸ್ತುತ ಕರ್ನಾಟಕಕ್ಕೆ 15.8 ಟಿಎಂಸಿ (ಶೇ. 10.74) ನೀರನ್ನು ಮಾತ್ರ ಹಂಚಿಕೆ ಮಾಡಲಾಗಿದೆ ಎಂದು ಅವರು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.