ತುಮಕೂರು: ‘ಗಾಂಧೀಜಿಯನ್ನು ಕೊಂದ ಗೋಡ್ಸೆ ವಿಚಾರ ಧಾರೆ ಬೇರೆ ಇದೆ. ಗಾಂಧೀಜಿ ಮತ್ತು ಗೋಡ್ಸೆಗೆ ಹೋಲಿಕೆ ಮಾಡಲು ಆಗುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದರು.
ಸಾಮಾಜಿಕ ಜಾಲ ತಾಣದಲ್ಲಿ ಗೋಡ್ಸೆ ಆರಾಧಿಸುವುದು, ವೈಭವೀಕರಿಸುವುದು ಹೆಚ್ಚಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಗೋಡ್ಸೆಯನ್ನು ಬೇರೆ ದೃಷ್ಟಿಕೋನದಲ್ಲಿ ನೋಡಬೇಕು. ಅವರ ವಿಚಾರಧಾರೆ ಬೇರೆ ಇದೆ’ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಉಸಿರಾಟ ತೊಂದರೆ ಇತ್ತು. ನಾನು ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.