ADVERTISEMENT

ಪ್ರಾಣವನ್ನೇ ಪಣಕ್ಕಿಟ್ಟು ಕೆಲಸ ಮಾಡಿದ 236 ಮಂದಿಗೆ ಸಿಎಂ ಚಿನ್ನದ ಪದಕ ಪ್ರದಾನ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 9:03 IST
Last Updated 13 ಜುಲೈ 2021, 9:03 IST
ವಿಧಾನಸೌಧದ ಸಾಂದರ್ಭಿಕ ಚಿತ್ರ
ವಿಧಾನಸೌಧದ ಸಾಂದರ್ಭಿಕ ಚಿತ್ರ   

ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ, ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆಯ 236 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಂಗಳವಾರ ಮುಖ್ಯಮಂತ್ರಿಯವರ ಚಿನ್ನದ ಪದಕ ಪ್ರದಾನ ಮಾಡಲಾಯಿತು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪದಕ ಪ್ರದಾನ ಮಾಡಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.

2015ರಿಂದ 2020ರ ಅವಧಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ, ತುರ್ತು ಸಂದರ್ಭಗಳಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಕೆಲಸ ಮಾಡಿವರನ್ನು ಮುಖ್ಯಮಂತ್ರಿಯವರ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.