ADVERTISEMENT

ರನ್ಯಾಗೆ ಜಾಮೀನು ನೀಡಬೇಡಿ: ಕಾಫಿಫೋಸಾ ಸಲಹಾ ಮಂಡಳಿ ಶಿಫಾರಸು

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 0:27 IST
Last Updated 18 ಜುಲೈ 2025, 0:27 IST
ರನ್ಯಾ ರಾವ್‌
ರನ್ಯಾ ರಾವ್‌   

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರಿಗೆ ಜಾಮೀನು ನೀಡಬೇಡಿ ಎಂದು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯ (ಕಾಫಿಫೋಸಾ) ಸಲಹಾ ಮಂಡಳಿ ಶಿಫಾರಸು ಮಾಡಿದೆ.

ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 14.2 ಕೆ.ಜಿ ಚಿನ್ನ ಕಳ್ಳಸಾಗಣೆ ಮಾಡಿದ್ದ ವಿಚಾರದಲ್ಲಿ ರೆವಿನ್ಯೂ ಗುಪ್ತಚರ ನಿರ್ದೇಶನಾಲಯವು (ಡಿಆರ್‌ಐ) ಮಾರ್ಚ್‌ನಲ್ಲಿ ರನ್ಯಾ ಅವರನ್ನು ಬಂಧಿಸಿತ್ತು. ಈ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಪ್ರತ್ಯೇಕ ತನಿಖೆ ನಡೆಸುತ್ತಿದೆ. 

ರನ್ಯಾ ವಿರುದ್ಧ ಕಾಫಿಪೋಸಾ ಅಡಿ ಪ್ರಕರಣ ದಾಖಲಿಸುವಂತೆ ಕೇಂದ್ರ ಗೃಹ ಸಚಿವಾಲಯವು ಡಿಆರ್‌ಐಗೆ ಸೂಚಿಸಿದೆ. ಕಾಫಿಪೋಸಾ ಸಲಹಾ ಮಂಡಳಿಯು ಈಚೆಗೆ ಡಿಆರ್‌ಐಗೆ ಶಿಫಾರಸು ನೀಡಿದ್ದು, ‘ಕಾಫಿಪೋಸಾ ಅಡಿ ಬಂಧನದಲ್ಲಿ ಇರುವವರೆಗೂ ರನ್ಯಾಗೆ ಜಾಮೀನು ನೀಡಬೇಡಿ’ ಎಂದು ಸೂಚಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.