ಬೆಂಗಳೂರು: ದುಬೈನಿಂದ ಭಾರತಕ್ಕೆ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅಲಿಯಾಸ್ ಹರ್ಷವರ್ಧಿನಿ ರನ್ಯಾ ಮತ್ತು ತರುಣ್ ಕುಂಡೂರು ರಾಜು ಅವರ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತಂತೆ ರನ್ಯಾ ರಾವ್ ಮತ್ತು ತರುಣ್ ರಾಜ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ. ರನ್ಯಾ ರಾವ್ ವಿರುದ್ಧ ಸೀಮಾ ಶುಲ್ಕ ಕಾಯ್ದೆ–1962ರ ಕಲಂ 135 (1)(ಎ) ಮತ್ತು 135(1)(ಬಿ) ಅಡಿ ಪ್ರಕರಣ ದಾಖಲಿಸಲಾಗಿದೆ.
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಸೆಷನ್ಸ್ ನ್ಯಾಯಾಲಯಗಳು ಮಾರ್ಚ್ 14 ಮತ್ತು 27ರಂದು ಕ್ರಮವಾಗಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.