ADVERTISEMENT

ಕರಾವಳಿಯಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 20:15 IST
Last Updated 19 ಆಗಸ್ಟ್ 2020, 20:15 IST

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಗ್ರಾಮದ ಮನೆಯೊಂದರ ಚಾವಣಿ ಹಾಗೂ ಗೋಡೆಗಳು ಕುಸಿದಿವೆ. ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪೇಟೆ ಮತ್ತು ಬಾಮಿ ಶಾಲೆಯ ಮಧ್ಯೆ ಹೆದ್ದಾರಿ ಬದಿಯಲ್ಲಿ ಭೂ ಕುಸಿತ ಉಂಟಾಗಿದ್ದು, ಬೃಹತ್ ಬಂಡೆಯೊಂದು ಹೆದ್ದಾರಿಯತ್ತ ಮುಖ ಮಾಡಿದೆ. ಬಂಡೆ ಉರುಳಿದರೆ ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.ಉಡುಪಿ ಜಿಲ್ಲೆಯ ಹಲವೆಡೆ ಬುಧವಾರ ಉತ್ತಮ ಮಳೆಯಾಗಿದೆ.

ತಗ್ಗಿದ ಮಳೆ:ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಬುಧವಾರಆಗುಂಬೆಯಲ್ಲಿ 12.14 ಸೆಂ.ಮೀ ಮಳೆಯಾಗಿದೆ.ಆಗುಂಬೆ, ತೀರ್ಥಹಳ್ಳಿಯಲ್ಲಿ ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯದ ನೀರಿನ ಮಟ್ಟ ಹೆಚ್ಚಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.