ADVERTISEMENT

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ನಿಧನ

​ಪ್ರಜಾವಾಣಿ ವಾರ್ತೆ
Published 5 ಜುಲೈ 2019, 6:23 IST
Last Updated 5 ಜುಲೈ 2019, 6:23 IST
gopal
gopal   

ಮಂಗಳೂರು: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್‌.ಗೋಪಾಲ ಭಂಡಾರಿ (66) ಅವರು ಗುರುವಾರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಂಗಳೂರಿನಿಂದ ಮಧ್ಯಾಹ್ನ 2 ಗಂಟೆಗೆ ವೋಲ್ವೊ ಬಸ್‌ನಲ್ಲಿ ಮಂಗಳೂರಿಗೆ ಹೊರಟಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಬಸ್‌ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ತಲುಪಿತ್ತು. ಆದರೆ ಬಹಳ ಹೊತ್ತಾದರೂ ಭಂಡಾರಿ ಅವರು ಸೀಟಿನಿಂದ ಎದ್ದಿರಲಿಲ್ಲ. ನಿರ್ವಾಹಕ ಅವರನ್ನು ಎಬ್ಬಿಸಲು ಯತ್ನಿಸಿದಾಗ ನಿಧನರಾಗಿರುವುದುಗೊತ್ತಾಗಿದೆ.

ನಿಧನ ಸುದ್ದಿ ತಿಳಿದ ಕಾಂಗ್ರೆಸ್‌ ಕಾರ್ಯಕರ್ತರು ಮೃತದೇಹ ಇಟ್ಟಿದ್ದ ವೆನ್ಲಾಕ್‌ ಆಸ್ಪತ್ರೆಗೆ ಧಾವಿಸಿದ್ದರು. ಭಂಡಾರಿ ಅವರು ಎರಡು ಬಾರಿ ಕಾರ್ಕಳ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.