ADVERTISEMENT

ಬೆಂಗಳೂರು | ಮುಜರಾಯಿ ದೇಗುಲಗಳಲ್ಲಿ ಇಂದು ಗೋಪೂಜೆ: ಆಯುಕ್ತರ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 23:30 IST
Last Updated 21 ಅಕ್ಟೋಬರ್ 2025, 23:30 IST
   

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ಬಲಿಪಾಡ್ಯಮಿ ದಿನದಂದು (ಅ. 22) ಕಡ್ಡಾಯವಾಗಿ ಶಾಸ್ತ್ರೋಕ್ತ ಗೋಪೂಜೆ ನೆರವೇರಿಸುವಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು ಸೂಚಿಸಿದ್ದಾರೆ.

ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಟಿಪ್ಪಣಿ ಆಧರಿಸಿ ಮಂಗಳವಾರ ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ. 

ಸುತ್ತೋಲೆಯಲ್ಲಿ ಏನಿದೆ?: ಹಿಂದೂ ಧರ್ಮದಲ್ಲಿ ಗೋವಿಗೆ ‘ಗೋಮಾತೆ’ ಎಂಬ ವಿಶೇಷ ಸ್ಥಾನಮಾನ ನೀಡಿ ಪೂಜಿಸಲಾಗುತ್ತಿದೆ. ನಮ್ಮ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ADVERTISEMENT

ಬಲಿಪಾಡ್ಯಮಿ ದಿನದಂದು ದೇವಾಲಯಗಳಲ್ಲಿನ ಗೋವುಗಳಿಗೆ ಸ್ನಾನ ಮಾಡಿಸಿ, ಅರಿಶಿನ-ಕುಂಕುಮ ಮತ್ತು ಹೂವುಗಳಿಂದ ಅಲಂಕರಿಸಬೇಕು. ನಂತರ, ಅಕ್ಕಿ, ಬೆಲ್ಲ, ಹಣ್ಣುಗಳನ್ನು ಒಳಗೊಂಡ ‘ಗೋಗ್ರಾಸ’ವನ್ನು ನೀಡಿ, ಸಂಜೆ ವಿಧಿವತ್ತಾಗಿ ಗೋಪೂಜೆ ನೆರವೇರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.