ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗಿರುವ ಕಾರಣ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗಗಳ ಜಿಲ್ಲೆಗಳಲ್ಲಿ ಎಲ್ಲ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಿಗದಿಪಡಿಸಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಈ ಕಚೇರಿ ಅವಧಿ ಬದಲಾವಣೆ ಏಪ್ರಿಲ್ 1ರಿಂದ ಮೇ 31ರ ವರೆಗೆ ಚಾಲ್ತಿಯಲ್ಲಿರುತ್ತದೆ. ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು.
ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯನಿರ್ವಹಿಸಲು ಸೂಚನೆ ನೀಡಿದರೆ ಸಮಯದ ಪರಿಮಿತಿ ಇಲ್ಲದೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.