ಬೆಂಗಳೂರು: ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ಥಾವರಚಂದ್ ಗೆಹಲೋತ್ ಅವರು ನಗರಕ್ಕೆ ಶನಿವಾರ ಬಂದರು.
ರಾಜ್ಯದ 19ನೇ ರಾಜ್ಯಪಾಲರಾಗಿ ಗೆಹಲೋತ್ ಅವರು ಭಾನುವಾರ (ಜುಲೈ11) ಬೆಳಿಗ್ಗೆ 11.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ದೆಹಲಿಯಿಂದ ಕುಟುಂಬ ಸದಸ್ಯರ ಜೊತೆಗೆ ಶನಿವಾರ ಬೆಳಿಗ್ಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಗೆಹಲೋತ್ ಅವರನ್ನು ಕಂದಾಯ ಸಚಿವ ಆರ್. ಅಶೋಕ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ವಾಗತಿಸಿದರು. ರಾಜಭವನದಲ್ಲಿ ಗೆಹಲೋತ್ ಮತ್ತು ಅವರ ಪತ್ನಿಯನ್ನು ರಾಜ್ಯಪಾಲ ವಜುಭಾಯಿ ವಾಲಾ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.