ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವ ಅಧಿಕಾರಿ ಮತ್ತು ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಜಿಬಿಎ ಅಡಿ ಐದು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಅಧಿಕಾರಿ ಮತ್ತು ನೌಕರರ ವಿರುದ್ಧ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ಅನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.