ADVERTISEMENT

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆ ತೆರೆದರೆ ಅಮಾನತು: ಶ್ರೀರಾಮುಲು ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2019, 19:34 IST
Last Updated 11 ನವೆಂಬರ್ 2019, 19:34 IST
ಶ್ರೀರಾಮುಲು
ಶ್ರೀರಾಮುಲು   

ತುರುವೇಕೆರೆ: ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುವಂತಿಲ್ಲ. ಅಲ್ಲದೆ ಖಾಸಗಿ ಆಸ್ಪತ್ರೆಗಳನ್ನು ತೆರೆದರೆ ಅಂತಹ ವೈದ್ಯರನ್ನು ಕೆಲಸದಿಂದ ಅಮಾನತು ಮಾಡಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೌಲಭ್ಯ ದೊರೆಯಬೇಕು. ಈ ದೃಷ್ಟಿಯಿಂದ ಹಿಂದೆ ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ಜಾರಿಯಲ್ಲಿದ್ದ ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳನ್ನು ತೆಗೆದುಹಾಕಲಾಗಿದೆ. ತಜ್ಞರು ಮತ್ತು ಎಂಬಿಬಿಎಸ್‍ ವೈದ್ಯರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT