ADVERTISEMENT

ಬೆಂಗಳೂರು: ಸರ್ಕಾರಿ ನೌಕರರ ಸಮಾವೇಶ ನಾಳೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2025, 1:00 IST
Last Updated 19 ಫೆಬ್ರುವರಿ 2025, 1:00 IST
ಸಿ.ಎಸ್. ಷಡಾಕ್ಷರಿ
ಸಿ.ಎಸ್. ಷಡಾಕ್ಷರಿ   

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು ಹಾಗೂ ಪದಾಧಿಕಾರಿಗಳ ‘ಸಮಾವೇಶ ಹಾಗೂ ಕಾರ್ಯಾಗಾರ’ ಫೆ.20ರಂದು ನಡೆಯಲಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು ಹಾಗೂ ಜಿಲ್ಲೆ– ತಾಲ್ಲೂಕು, ಯೋಜನಾ ಶಾಖೆಗಳ ನಿರ್ದೇಶಕರು– ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ತಿಳಿಸಿದ್ದಾರೆ.

‘ಪ್ರಜಾಹಿತ ಆಡಳಿತ ಕಾರ್ಯಾಗಾರ’ದಲ್ಲಿ ‘ಆಡಳಿತದಲ್ಲಿ ದಕ್ಷತೆ, ಪಾರದರ್ಶಕತೆ, ಪ್ರಾಮಾಣಿಕತೆ’ ವಿಷಯದ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಉಪನ್ಯಾಸ ನೀಡಲಿದ್ದಾರೆ.  ‘ಸಾರ್ವಜನಿಕ ಸೇವೆಯಲ್ಲಿ ನೌಕರರ ಪಾತ್ರ’ ವಿಷಯದ ಕುರಿತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಹಾಗೂ ‘ಮಾಹಿತಿ ಹಕ್ಕು ಅಧಿನಿಯಮ: ಸವಾಲುಗಳು– ಪರಿಹಾರಗಳು’ ವಿಷಯವಾಗಿ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಧಾಕಪ್ಪ ಉಪನ್ಯಾಸ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಲಿದ್ದಾರೆ.

ADVERTISEMENT

‘ಸಮಾವೇಶ ಹಾಗೂ ಕಾರ್ಯಾಗಾರ’ದಲ್ಲಿ ಭಾಗವಹಿಸುವವರಿಗೆ ‘ವಿಶೇಷ ಸಾಂದರ್ಭಿಕ ರಜೆ’ಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.